ವಿಜಯಪುರ: ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಖಾಲಿ ಸಿಲಿಂಡರ್ ಇಟ್ಟು ಶುಕ್ರವಾರ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಮುಖಂಡ ಅಬ್ದುಲ್ ಹಮ್ಮಿದ್ ಮುಶ್ರಿಫ್ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೈನಂದಿನ ಬಳಕೆಯಾದ ಗ್ಯಾಸ್ ಸಿಲಿಂಡರ್ ಬೆಲೆ ಗಗನಕ್ಕೇರುತ್ತಿರುವುದನ್ನು ಖಂಡಿಸಿ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ತಕ್ಷಣವೇ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಸುಜಾತಾ ಕಳ್ಳಿಮನಿ, ಕಾಂಗ್ರೆಸ್ ನಾಯಕಿ ಕಾಂತಾ ನಾಯಕ್, ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.