ವಿಜಯಪುರ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗೆದ್ದಲಮರಿ ಬಳಿ ನಡೆದಿದೆ.
ಅಪಘಾತದಲ್ಲಿ ಬಸಪ್ಪ, ಕರಡಕಲ್, ಶಿವಾನಂದ ಲಮಾಣಿ, ಭೂತಾಳಪ್ಪ ಕುರಿ, ಮಂಜುನಾಥ ಜುಮನಾಳ ಗಾಯಗೊಂಡಿದ್ದಾರೆ. ಇನ್ನು ಅಪಘಾತದಲ್ಲಿ ಗಾಯಗೊಂಡವರು ಮುದ್ದೇಬಿಹಾಳ ತಾಲೂಕಾಸ್ಪತ್ರೆಗ ದಾಖಲು ಮಾಡಲಾಗಿದೆ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.