ವಿಜಯಪುರ: ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲೇ ಮಹಿಳೆ ಅಸುನೀಗಿರುವ ಘಟನೆ ವಿಜಯಪುರ ನಗರದ ಮನಗೂಳಿ ರಸ್ತೆಯಲ್ಲಿ ನಡೆದಿದೆ. ಅಂದಾಜು 70ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ. ಇನ್ನು ಮೃತಪಟ್ಟಿರುವ ಮಹಿಳೆಯ ಹೆಸರು ತಿಳಿದು ಬಂದಿಲ್ಲ. ಖಾಸಗಿ ವಾಹನದಲ್ಲಿ ಶವವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಜಯಪುರ ಸಂಚಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.