ಬೆಂಗಳೂರು:
ರಾಜ್ಯ ಕಾಂಗ್ರೇಸ್ ನೇತೃತ್ವದ ಸರ್ಕಾರ ರಾಜ್ಯಧಾನಿಯಿಂದ ಹಳ್ಳಿವರೆಗೆ ಬರಿ ಹಗರಣ ಮಾಡತ್ತಾ ಇದೆ, ಮುಖ್ಯಮಂತ್ರಿಗಳು ಮತ್ತು ಸವಚಿವರು ಮಾತ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದುಕೊಂಡಿದರೆ ತಪ್ಪು ಈಗ ಅದು ಶಾಸಕರುಗಳಿಗೂ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.ಪಿಎಸ್ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒತ್ತಡದ ಮೇಲೆಯೇ ವಾಲ್ಮೀಕಿ ನಿಗಮದ ಅಧಿಕಾರಿ ಆತಹತ್ಯೆ ಮಾಡಿಕೊಂಡಿದ್ದರು.
ಈಗ ವರ್ಗಾವಣೆಗೆ ಶಾಸಕರು ಹಣ ಕೇಳಿದ್ದಕ್ಕೆ ಪರಶುರಾಮ್ ಅವರ ಸಾವಾಗಿದೆ ಎಂದು ಆಕೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯಿಸಿ, ಕಾಂಗ್ರೆಸ್ ಶಾಸಕರು ವರ್ಗಾವಣೆ ದಂಧೆಯಲ್ಲಿ ನೇರ ಪಾಲ್ಗೊಂಡಿದ್ದಾರೆ. ಅಲ್ಲಿನ ಶಾಸಕರು ವರ್ಗಾವಣೆಗೆ ದೊಡ್ಡ ಮೊತ್ತದ ಹಣ ಕೇಳುತ್ತಿದ್ದಾರೆ. ಪಿಎಸ್ಐ ಪರಶುರಾಮ್ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯೇಕು ಎಂದು ಆಗ್ರಹಿಸಿದರು. ಈ ಸರ್ಕಾರದಲ್ಲಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ, ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು.